alex Certify ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ವಾಯುಪಡೆಯಲ್ಲಿ ‘ಅಗ್ನಿ ವೀರ’ ರಾಗಲು ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ವಾಯುಪಡೆಯಲ್ಲಿ ‘ಅಗ್ನಿ ವೀರ’ ರಾಗಲು ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಗ್ನಿಪಥ್ ಯೋಜನೆ ಅಡಿ ಅಗ್ನಿವೀರರ ನೇಮಕಕ್ಕೆ ವಾಯುಪಡೆ ಆಹ್ವಾನಿಸಿರುವ ಆನ್ಲೈನ್ ಅರ್ಜಿ ಸಲ್ಲಿಕೆಗೆ ಜುಲೈ 5ರ ನಾಳೆಯೇ ಕೊನೆಯ ದಿನಾಂಕವಾಗಿದೆ.

3000 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಜೂನ್ 24 ರಿಂದ ಆರಂಭವಾಗಿರುವ ನೇಮಕ ಪ್ರಕ್ರಿಯೆಗೆ ಈಗಾಗಲೇ ಎರಡು ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ತಿಳಿದುಬಂದಿದೆ.

ಪಿಯುಸಿ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇಕಡ 50 ಅಂಕಗಳೊಂದಿಗೆ ಉತ್ತೀರ್ಣವಾಗಿರುವವರು ಅರ್ಜಿ ಸಲ್ಲಿಸಲು ಅವಕಾಶವಿದ್ದು, ಹಾಗೆಯೇ ಮೂರು ವರ್ಷಗಳ ಇಂಜಿನಿಯರಿಂಗ್ ಡಿಪ್ಲೋಮಾ ಕೋರ್ಸ್ ಅಥವಾ ಎರಡು ವರ್ಷಗಳ ವೊಕೇಶನಲ್ ಜೊತೆಗೆ ನಾನ್ ವೊಕೇಶನಲ್ ಕೋರ್ಸ್ (ಫಿಸಿಕ್ಸ್, ಮ್ಯಾಥ್ಸ್) ಅರ್ಜಿ ಸಲ್ಲಿಸಬಹುದಾಗಿದೆ. ಇಂಗ್ಲಿಷ್ ವಿಷಯದಲ್ಲಿ ಕನಿಷ್ಠ ಶೇಕಡ 50 ಅಂಕ ಪಡೆದಿರುವುದು ಕಡ್ಡಾಯವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...