alex Certify ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ರೈಲ್ವೆ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ರೈಲ್ವೆ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ 21 ಸ್ಪೋರ್ಟ್ಸ್ ಪರ್ಸನ್ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ಅಭ್ಯರ್ಥಿಗಳು ಸ್ಪೋರ್ಟ್ಸ್ ಕೋಟಾದಡಿ ಅರ್ಜಿ ಸಲ್ಲಿಸಬಹುದು.

ಜನವರಿ 22ರೊಳಗಾಗಿ ಆನ್ ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

wcr.indianrailways.gov.in ಅಧಿಕೃತ ವೆಬ್ ತಾಣಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.

NCB ಅಧಿಕಾರಿಗಳಿಂದ ಬೃಹತ್ ಬೇಟೆ, ಅಂತರಾಷ್ಟ್ರೀಯ ಖದೀಮ ಅಂದರ್

ಖಾಲಿ ಇರುವ ಸ್ಪೋರ್ಟ್ಸ್ ಖೋಟಾ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್ ನಿಂದ ಕಡ್ಡಾಯವಾಗಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾಗಿರಬೇಕು. ಅಲ್ಲದೇ, ಟೆಕ್ನಿಕಲ್ ಹುದ್ದೆಗಳಿಗೆ ಐಟಿಐ ಪಾಸ್ ಆಗಿರಬೇಕು.

18 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಲ್ಲದೇ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ 3 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದೇಶದಲ್ಲಿನ ಯಾವುದೇ ಭಾಗದಲ್ಲಿಯಾದರೂ ಕರ್ತವ್ಯಕ್ಕೆ ನಿಯೋಜನೆ ಮಾಡಬಹುದು. ಅಭ್ಯರ್ಥಿಗಳ ಕ್ರೀಡಾ ಸಾಧನೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಸಿದ್ಧಪಡಿಸಿ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...