alex Certify ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿದ್ದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿದ್ದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಬೆಂಗಳೂರು: ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ಆರಂಭವಾಗಿರುವ ಹಿನ್ನೆಲೆಯಲ್ಲಿ ಹಲವರು ಉದ್ಯೋಗ ಕಳೆದುಕೊಳ್ಳುವ ಭೀತಿಗೊಳಗಾಗಿದ್ದು, ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉಭಯ ದೇಶಗಳ ನಡುವೆ ಯುದ್ಧದ ವಾತಾವರಣವಿದೆ. ಇದರಿಂದ ಔದ್ಯೋಗಿಕ ಕ್ಷೇತ್ರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಯಾರೂ ಯಾವುದೇ ಉದ್ಯೋಗ ಕಳೆದುಕೊಳ್ಳುವ ಭೀತಿ ಇಲ್ಲ ಎಂದರು.

ಉಕ್ರೇನ್ ನಿಂದ ನಮಗೆ ಯಾವುದೇ ರೀತಿ ಸಮಸ್ಯೆಯಾಗದು. ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಈಗಾಗಲೇ ಕೇಂದ್ರ ಸರ್ಕಾರದಿಂದ ಸಹಾಯವಾಣಿ ತೆರೆಯಲಾಗಿದೆ. ಸಹಾಯವಾಣಿ ಮೂಲಕ ಭಾರತೀಯರ ರಕ್ಷಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...