ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಶೀಘ್ರದಲ್ಲೇ 5000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸರ್ಕಾರ ಸಿದ್ಧತೆ ನಡೆಸಿದೆ.
ಗೃಹ ಸಚಿವ ಅರಗ ಜ್ಞಾನೇಂದ್ರ ಅರಸಿಕೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ಮಾಹಿತಿ ನೀಡಿದ್ದು, ಪಿಎಸ್ಐ ಅಕ್ರಮದ ಜಾಡು ಬೆನ್ನತ್ತಿರುವ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಗೆ ಹಿನ್ನಡೆಯಾಗಿದೆ ಎಂದಿದ್ದಾರೆ.
ಅಲ್ಲದೆ, ರಾಜ್ಯದ ವಿವಿಧ ಭಾಗಗಳಲ್ಲಿ ಪೊಲೀಸ್ ಠಾಣೆಯ ಕಟ್ಟಡಗಳ ನಿರ್ಮಾಣಕ್ಕಾಗಿ ನೂರಾರು ಕೋಟಿ ರೂಪಾಯಿಗಳ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.