ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ಬೆಳಗಾವಿ ಜಿಲ್ಲೆಯ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ನೆರವೇರಲಿದೆ. ಅದಕ್ಕೂ ಮುನ್ನ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.
ಎಂ.ಎಸ್. ರಾಮಯ್ಯ ಆಸ್ಪತ್ರೆಯಿಂದ ಎಚ್ಎಎಲ್ ಏರ್ಪೋರ್ಟ್ ಗೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗುತ್ತಿದ್ದು, ಅಲ್ಲಿಂದ ಏರ್ ಲಿಫ್ಟ್ ಮೂಲಕ ಬೆಳಗಾವಿಗೆ ತೆಗೆದುಕೊಂಡು ಹೋಗಲಾಗುತ್ತದೆ.
ಉಮೇಶ್ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಗೌರವಾರ್ಥವಾಗಿ ಇಂದು ಬೆಳಗಾವಿ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮೊದಲಿಗೆ ಬೆಳಗಾವಿಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.