ಬೆಂಗಳೂರು ಸಂಜಯನಗರ ಠಾಣೆಯ ಎಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಪ್ತಿ ಮಾಡಿದ್ದ ಆಟೋ ಬಿಡುಗಡೆಗಾಗಿ 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಎಎಸ್ಐ ವಿಜಯಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
50 ಸಾವಿರ ರೂಪಾಯಿ ಲಂಚ ನೀಡುವಂತೆ ಅವರು ಬೇಡಿಕೆ ಇಟ್ಟಿದ್ದರು. ಮಹಮ್ಮದ್ ಸುಜತ್ ನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಬ್ರೋಕರ್ ಸೈಯದ್ ರಿಜ್ವಾನ್ ಮತ್ತು ಎಎಸ್ಐ ವಿಜಯಕುಮಾರ್ ಅವರನ್ನು ಬಂಧಿಸಲಾಗಿದೆ. ಇಬ್ಬರನ್ನೂ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ.