ಎಐಸಿಸಿ ಏನು ಹೇಳಿದೆಯೋ ಅದೇ ನಂದು; ಸಿಎಂ ಆಗಿ ಆಯ್ಕೆ ಆದ ಬಳಿಕ ಸಿದ್ದರಾಮಯ್ಯ ಹೇಳಿಕೆ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಕಾಂಗ್ರೆಸ್ ವರಿಷ್ಠರು ಅಧಿಕೃತವಾಗಿ ಘೋಷಣೆ ಮಾಡಿದ್ದು, ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಡಿಸಿಎಂ ಹುದ್ದೆ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ಸಹ ಡಿ.ಕೆ. ಶಿವಕುಮಾರ್ ನಿರ್ವಹಿಸಲಿದ್ದಾರೆ.

ಪಕ್ಷದ ವರಿಷ್ಠರು ತಮ್ಮ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ಘೋಷಣೆ ಮಾಡುತ್ತಿದ್ದಂತೆಯೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ, ಎಐಸಿಸಿ ಏನು ಹೇಳಿದೆಯೋ ಅದೇ ನನ್ನ ನಿಲುವು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಇತರೆ ಪ್ರಶ್ನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು, ಪಕ್ಷದ ವರಿಷ್ಠರು ಏನು ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ನನ್ನ ಸಹಮತವಿದೆ. ಅವರ ಮಾರ್ಗದರ್ಶನದಲ್ಲಿ ಕರ್ನಾಟಕದಲ್ಲಿ ಹೊಸ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read