ಎಚ್.ಡಿ. ರೇವಣ್ಣ ವಿರುದ್ಧ ಕಣಕ್ಕಿಳಿದಿದ್ದಾರೆ ಅದೇ ಹೆಸರಿನ ಮತ್ತೊಬ್ಬ ಅಭ್ಯರ್ಥಿ….!

ಮೇ 10ರಿಂದ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದು, ಈಗಾಗಲೇ ಪಕ್ಷದಿಂದ ಅವರ ಹೆಸರು ಘೋಷಣೆಯಾಗಿದೆ.

ಇದರ ಮಧ್ಯೆ ಶನಿವಾರದಂದು ಚನ್ನರಾಯಪಟ್ಟಣ ತಾಲೂಕಿನ ನಿವಾಸಿ ಎಚ್.ಡಿ. ರೇವಣ್ಣ ಎಂಬವರು ಹೊಳೆನರಸೀಪುರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಎಚ್.ಡಿ ರೇವಣ್ಣ ಬಿನ್ ದೊಡ್ಡೇಗೌಡ ಹೊಳೆನರಸೀಪುರ ಪಟ್ಟಣದ ತಾಲೂಕು ಕಚೇರಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದು, ಇವರು ಹೊಳೆನರಸೀಪುರ ಕ್ಷೇತ್ರದ ಚನ್ನರಾಯಪಟ್ಟಣ ತಾಲೂಕು ವ್ಯಾಪ್ತಿಗೆ ಒಳಪಡುವ ದಂಡಿಗನಹಳ್ಳಿ ಹೋಬಳಿಯ ಸಾಗತವಳ್ಳಿ ಅಂಚೆ, ಕೋಡಿಹಳ್ಳಿ ಗ್ರಾಮದ ನಿವಾಸಿ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read