alex Certify ಎತ್ತುಗಳ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎತ್ತುಗಳ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ದುರ್ಮರಣ

ಕೊಪ್ಪಳ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ದನದಪೂಜೆಗೆಂದು ಎತ್ತುಗಳ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ಕಲ್ಲು ಕ್ವಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

9 ವರ್ಷದ ಮಹಾಂತೇಶ್ ಹಾಗೂ 9 ವರ್ಷದ ವಿಜಯ್ ಮೃತ ಬಾಲಕರು. ನಾಲ್ವರು ಬಾಲಕರು ಎತ್ತುಗಳ ಮೈ ತೊಳೆಯಲೆಂದು ಹೋಗಿದ್ದರು. ಈ ವೇಳೆ ದುರಂತ ಸಂಭವಿಸಿದೆ.

ನಾಲ್ವರು ಬಾಲಕರೂ ಕಲ್ಲು ಕ್ವಾರಿಯ ಗುಂಡಿಗೆ ಬಿದ್ದಿದ್ದಾರೆ. ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರೆ, ಇಬ್ಬರು ಬದುಕುಳಿದಿದ್ದಾರೆ. ತೀವ್ರವಾಗಿ ಅಸ್ವಸ್ಥರಾಗಿರುವ ಬಾಲಕರಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...