ಮುಸ್ಲಿಂ ಯುವಕನೊಬ್ಬ ತನ್ನ ಎದೆಯ ಮೇಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹಚ್ಚೆ ಹಾಕಿಸಿಕೊಂಡು ಅಭಿಮಾನ ಮೆರೆದಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಮೈನ್ಪುರಿ ಮತ್ತು ಫರೂಕಾಬಾದ್ ಜಿಲ್ಲೆಗಳ ಗಡಿ ಭಾಗದ ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ 23 ವರ್ಷದ ಯಮೀನ್ ಸಿದ್ಧಿಕಿ ಈ ರೀತಿ ಅಭಿಮಾನ ಮೆರೆದ ಯುವಕನಾಗಿದ್ದು, ಯೋಗಿ ಆದಿತ್ಯನಾಥ್ ಜನ್ಮ ದಿನದ ಪ್ರಯುಕ್ತ ಹಚ್ಚೆ ಹಾಕಿಸಿಕೊಂಡಿರುವುದಾಗಿ ಹೇಳಿದ್ದಾನೆ.
ಯೋಗಿ ಆದಿತ್ಯನಾಥ್ ನನ್ನ ಮಾದರಿ ವ್ಯಕ್ತಿ ಎಂದು ಹೇಳಿರುವ ಸಿದ್ಧಿಕಿ, ಸಂಬಂಧಿಕರು – ಸ್ನೇಹಿತರಿಂದ ತನ್ನ ಈ ಕಾರ್ಯದ ಕುರಿತು ಟೀಕೆಗಳು ಕೇಳಿ ಬರುತ್ತಿದ್ದರೂ ಯಾವುದಕ್ಕೂ ತಲೆಕೆಡಿಸಿಕೊಂಡಿಲ್ಲ.