ಎರಡೂವರೆ ವರ್ಷದ ಬಳಿಕ ಸಿಎಂ ಆಗಲಿರುವ ಡಿಕೆಶಿ ಮುಂದೆ ಸಿದ್ದರಾಮಯ್ಯನವರಿಟ್ಟಿದ್ದಾರಂತೆ ಈ ಷರತ್ತು….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಕೆಲ ಸಚಿವರುಗಳು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ವರಿಷ್ಠರೊಂದಿಗಿನ ಮಾತುಕತೆ ಬಳಿಕ ರಾಜಿ ಸೂತ್ರಕ್ಕೆ ಸಮ್ಮತಿಸಿದ್ದು, ಮೊದಲ ಅವಧಿಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲಿದ್ದರೆ, ಎರಡೂವರೆ ವರ್ಷದ ಬಳಿಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ. ಇದೇ ಸಂದರ್ಭದಲ್ಲಿ ಪಕ್ಷದ ಕೇಂದ್ರ ನಾಯಕರು ಹಾಗೂ ಡಿ.ಕೆ. ಶಿವಕುಮಾರ್ ಮುಂದೆ ಸಿದ್ದರಾಮಯ್ಯ ಷರತ್ತೊಂದನ್ನು ಇಟ್ಟಿದ್ದು, ಇದಕ್ಕೆ ಸಮ್ಮತಿಯೂ ಸಿಕ್ಕಿದೆ ಎನ್ನಲಾಗಿದೆ.

ಈಗಾಗಲೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಸಿದ್ದರಾಮಯ್ಯ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈ ಬಾರಿ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿದ್ದ ಅವರು ವರಿಷ್ಠರ ನಿರ್ದೇಶನದಂತೆ ಕೊನೆ ಕ್ಷಣದಲ್ಲಿ ವರುಣಾದಿಂದ ಸ್ಪರ್ಧಿಸಿ ಜಯ ಸಾಧಿಸಿದ್ದು, ಹೀಗಾಗಿ ವರುಣಾ ಕ್ಷೇತ್ರದ ಶಾಸಕರಾಗಿದ್ದ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವಕಾಶ ವಂಚಿತರಾಗಬೇಕಾಯಿತು.

ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಹಾಗೂ ಡಿ.ಕೆ. ಶಿವಕುಮಾರ್ ಅವರ ಬಳಿ ಮುಂದಿನ ಅವಧಿಯಲ್ಲಿ ಅಂದರೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಂದರ್ಭದಲ್ಲಿ ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯನವರನ್ನು ಸಂಪುಟದಲ್ಲಿ ಸೇರ್ಪಡೆ ಮಾಡಿಕೊಂಡು ಸೂಕ್ತ ಸ್ಥಾನಮಾನ ನೀಡಬೇಕೆಂದು ಸಿದ್ದರಾಮಯ್ಯ ಕೇಳಿದ್ದಾರಂತೆ. ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಡಿ.ಕೆ. ಶಿವಕುಮಾರ್ ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read