ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗುತ್ತಿದ್ದಾರೆ. ವಾಯು ಮಾಲಿನ್ಯ ಮುಕ್ತ ಇವಿ ವಾಹನಗಳ ಖರೀದಿಗೆ ಪ್ರೋತ್ಸಾಹಿಸಲು ಸರ್ಕಾರಗಳು ಸಹ ಹಲವು ರಿಯಾಯಿತಿಗಳನ್ನು ನೀಡುತ್ತಿವೆ.
ಅಲ್ಲದೆ ಚಾರ್ಜಿಂಗ್ ಸ್ಟೇಷನ್ ಗಳ ಕೊರತೆಯನ್ನು ನೀಗಿಸಲು ಮುಂದಾಗಿರುವ ಸರ್ಕಾರ, ರಾಜ್ಯದಲ್ಲಿ ಇನ್ನೂ ಮೂರು ಸಾವಿರ ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಈ ಕುರಿತು ಇಂಧನ ಸಚಿವ ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.
ಮುಖದಲ್ಲಿ ಮೂಡುವ ನೆರಿಗೆಗೆ ಇಲ್ಲಿದೆ ‘ಮನೆಮದ್ದು’
ಇದರ ಮಧ್ಯೆ ಇವಿ ಜಾಗೃತಿ ಪೋರ್ಟಲ್ www.evkarnataka.co.in ಗೆ ಚಾಲನೆ ನೀಡಲಾಗಿದ್ದು, ಈ ವೆಬ್ ಸೈಟ್ ಗೆ ಭೇಟಿ ನೀಡಿದರೆ ಎಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸ್ಟೇಷನ್ ಇದೆ ? ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವುದು ಹೇಗೆ ? ಎಲೆಕ್ಟ್ರಿಕ್ ವಾಹನ ಖರೀದಿಸುವುದರಿಂದ ಸಿಗುವ ಲಾಭವೇನು ? ಸ್ವತಃ ಎಲೆಕ್ಟ್ರಿಕ್ ವಾಹನ ಉದ್ಯಮ ಆರಂಭಿಸುವುದು ಹೇಗೆ ? ಮೊದಲಾದ ಸಾರ್ವಜನಿಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಸಿಗಲಿದೆ.