ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಕೆಗೆ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅಡಿಕೆ ಸಂಶೋಧನಾ ಕೇಂದ್ರ ಈ ರೋಗ ನಿರ್ವಹಣೆ ಕುರಿತು ಮಹತ್ವದ ಮಾಹಿತಿ ನೀಡಿದೆ.
ರೋಗಭಾದಿತ ಒಣಗಿದ ಗರಿಗಳನ್ನು ಕತ್ತರಿಸಿ ತೆಗೆದು ನಾಶಪಡಿಸುವುದರಿಂದ ರೋಗ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯಬಹುದು.
ಬಿಸಿಲು ಬೀಳುವಂತೆ ಮಾಡಲು ಅಂತರ ಬೆಳೆಗಳ ಅಥವಾ ಕಾಡು ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯುವುದು.
ಮರಗಳ ಉತ್ತಮ ಬೆಳವಣಿಗೆಗೆ ಕೊಟ್ಟಿಗೆ ಗೊಬ್ಬರದ ಜೊತೆಗೆ ಶಿಫಾರಿತ ಪೋಷಕಾಂಶಗಳಾದ ಸಾರಜನಕ:ರಂಜಕ: ಪೊಟ್ಯಾಷ್ (100:40:140 ಗ್ರಾಂ ಪ್ರತಿಮರಕ್ಕೆ) ನೀಡಬೇಕು.
ಶೇಕಡಾ ಒಂದರ ಬೋರ್ಡೋ ದ್ರಾವಣ ಅಥವಾ ಶೇಕಡಾ 0.3 ರ ತಾಮ್ರದ ಆಕ್ಸಿ ಕ್ಲೋರೈಡ್ ಸಿಂಪಡಿಸುವುದು ಎಂದು ತಿಳಿಸಲಾಗಿದೆ.