ಬೆಂಗಳೂರು: ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಗುರುತಿನ ಚೀಟಿ ವಿತರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.
1.98 ಲಕ್ಷ ಶಿಕ್ಷಕರಿಗೆ ಗುರುತಿನ ಚೀಟಿ ನೀಡಲಾಗುವುದು. ಪ್ರತಿ ಶಿಕ್ಷಕರಿಗೆ 50 ರೂ.ನಂತೆ 99.09 ಲಕ್ಷ ರೂ. ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಬಿಡುಗಡೆ ಮಾಡಿದ್ದಾರೆ. ನವೆಂಬರ್ ಅಂತ್ಯದ ವೇಳೆಗೆ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಗುರುತಿನ ಚೀಟಿ ನೀಡಲಾಗುವುದು.
ಶಿಕ್ಷಕರಿಗೆ ಗುರುತಿನ ಚೀಟಿ ನೀಡಬೇಕೆಂಬ ಒತ್ತಾಯ ಕೇಳಿಬಂದಿದ್ದು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಚಿಹ್ನೆಯೊಂದಿಗೆ ನವೆಂಬರ್ 30 ರೊಳಗೆ ಎಲ್ಲ 1.98 ಶಿಕ್ಷಕರಿಗೆ ಗುರುತಿನ ಚೀಟಿ ವಿತರಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.