ಗರ್ಭಪಾತದ ಕುರಿತಂತೆ ಗುರುವಾರದಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಎಲ್ಲ ವಿವಾಹಿತ ಹಾಗೂ ಅವಿವಾಹಿತ ಮಹಿಳೆಯರು ಗರ್ಭ ಧರಿಸಿದ 14 ರಿಂದ 20 ವಾರಗಳ ಅವಧಿಯಲ್ಲಿ ಕಾನೂನುಬದ್ಧವಾಗಿ ಗರ್ಭಪಾತ ಮಾಡಿಸಿಕೊಳ್ಳಲು ಅರ್ಹರು ಎಂದು ತಿಳಿಸಿದೆ.
ಅವಿವಾಹಿತ ಯುವತಿಯೊಬ್ಬರು ಸಲ್ಲಿಸಿದ್ದ ಅರ್ಜಿ ಪ್ರಕರಣದ ವಿಚಾರಣೆ ವೇಳೆ ಈ ತೀರ್ಪು ಹೊರಬಿದ್ದಿದ್ದು, ಗರ್ಭಪಾತದಂತಹ ಗಂಭೀರ ವಿಚಾರದಲ್ಲಿ ವಿವಾಹಿತ ಹಾಗೂ ಅವಿವಾಹಿತ ಮಹಿಳೆಯರು ಎಂದು ತಾರತಮ್ಯ ಮಾಡುವಂತಿಲ್ಲ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಹೀಗಾಗಿ ಬೇಡವಾದ ಭ್ರೂಣ ತೆಗೆಸಲು ವಿವಾಹಿತ ಹಾಗೂ ಅವಿವಾಹಿತ ಮಹಿಳೆಗೆ ಸಮಾನ ಹಕ್ಕುಗಳಿದ್ದು, ಇದರಲ್ಲಿ ತಾರತಮ್ಯ ಮಾಡುವಂತಿಲ್ಲ. ಅವರಿಬ್ಬರ ಕಷ್ಟವನ್ನು ಸಮಾನವಾಗಿ ಪರಿಗಣಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.