alex Certify ಎಸಿಬಿ ಕಚೇರಿಯ 15 ಜನ ಸಿಬ್ಬಂದಿಗೆ ಕೊರೊನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸಿಬಿ ಕಚೇರಿಯ 15 ಜನ ಸಿಬ್ಬಂದಿಗೆ ಕೊರೊನಾ ಸೋಂಕು

ಬೆಂಗಳೂರು: ಕೊರೊನಾ ಎಲ್ಲೆಡೆ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಸದ್ಯ ಎಸಿಬಿ ಕಚೇರಿಗೂ ನುಗ್ಗಿದೆ. ನಗರದಲ್ಲಿನ ಭ್ರಷ್ಟಾಚಾರ ನಿಗ್ರಹ ದಳ ಕಚೇರಿಯಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ 15 ಜನರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಮಂಗಳವಾರ ಕೂಡ ಸಿಸಿಬಿ ಕಚೇರಿಯಲ್ಲಿನ 17 ಜನ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಮತ್ತೆ ಬುಧವಾರ 15 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರು ಈಗಾಗಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕಚೇರಿಯಲ್ಲಿನ ಇನ್ನುಳಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದೆ.

ಕಚೇರಿಯ ಬಹುತೇಕ ಸೋಂಕಿತರಿಗೆ ಕೊರೊನಾದ ಸೌಮ್ಯ ಲಕ್ಷಣಗಳು ಕಂಡು ಬಂದಿವೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...