
ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ -1, ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ-1 ನಡೆಯಲಿದೆ.
ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಕೆಎಸ್ಆರ್ಟಿಸಿ ಕೂಡ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ಮುಂದಾಗಿದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ದಿನಗಳಂದು ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ ಎಂದು ಹೇಳಲಾಗಿದೆ.