ವಿಧಾನಪರಿಷತ್ ಚುನಾವಣೆಯ ಬೆಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ವಿರುದ್ಧ ಆರೋಪಗಳ ಸುರಿಮಳೆಗೈದಿದ್ದ ಸಚಿವ ಎಸ್.ಟಿ. ಸೋಮಶೇಖರ್ ವಿರುದ್ಧ ಹೆಚ್. ವಿಶ್ವನಾಥ್ ಕಿಡಿಕಾರಿದ್ದಾರೆ. ಚುನಾವಣೆ ವಿಚಾರದಲ್ಲಿ ವೈಯಕ್ತಿಕ ಟೀಕೆ ಮಾಡೋದು ಸರಿಯಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಯ ಪರ ಬ್ಯಾಟ್ ಬೀಸಿದ್ದಾರೆ.
ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಎಸ್.ಟಿ. ಸೋಮಶೇಖರ್ ಒಬ್ಬ ಮಂತ್ರಿಯಾಗಿ ಈ ರೀತಿಯ ಮಾತುಗಳನ್ನು ಆಡಬಾರದಿತ್ತು. ಇದರಿಂದ ಬಾಬು ಮನೆಯವರಿಗೆ ಎಷ್ಟು ನೋವಾಗಿದೆ. ಸೋಮಶೇಖರ್ ಈ ರೀತಿ ವೈಯಕ್ತಿಕ ಟೀಕೆ ಮಾಡಿದ್ದು ಸರಿಯಲ್ಲ. ಮೈಸೂರು ಜೆಡಿಎಸ್ ಅಭ್ಯರ್ಥಿಯೂ ನೋವುಂಟು ಮಾಡಿದ್ದಾರೆ ಎಂದು ಹೇಳಿದರು.
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ಗೋಪಾಲಕೃಷ್ಣ ಹಾಗೂ ವಿಶ್ವನಾಥ್ ಇಬ್ಬರೂ ರಿಯಲ್ ಎಸ್ಟೇಟ್ ಗಿರಾಕಿಗಳು. ಅವರಿಬ್ಬರದು ಏನೇನು ಇದೆಯೋ ಯಾರಿಗೆ ಗೊತ್ತು..? ಅದನ್ನೆಲ್ಲ ರಾಜಕೀಯಕ್ಕೆ ಎಳೆತಂದು ಏನೇನೋ ಮಾತನಾಡುತ್ತಿದ್ದಾರೆ ಎಂದು ಕುಟುಕಿದ್ರು.