alex Certify ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣ; ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣ; ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದೇನು…?

ಬೆಂಗಳೂರು: ಬಿಜೆಪಿ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಪಂತ್, ಪ್ರಕರಣದ ಬಗ್ಗೆ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಮುಂದೆ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಪೊಲೀಸರು ತೆಗೆದುಕೊಳ್ಳಲಿದ್ದಾರೆ. ವಿಚಾರಣೆ ವೇಳೆ ಯಾವ ಮಾಹಿತಿ ಬಹಿರಂಗವಾಗುತ್ತೆ ಅದರ ಮೇಲೆ ಕ್ರಮ ಜರುಗಿಸಲಾಗುತ್ತದೆ. ಸದ್ಯಕ್ಕೆ ಹೆಚ್ಚಿನ ಮಾಹಿತಿ ನೀಡಲ್ಲ ಎಂದರು.

ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಿದಂತೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಹಾಗೂ ಕುಳ್ಳ ದೇವರಾಜ್ ಎಂಬ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...