ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಉತ್ಸಾಹದಲ್ಲಿದ್ದು, ಈ ಬಾರಿಯ ಲೋಕಸಭಾ ಅಧಿವೇಶನದಲ್ಲೇ ಇದನ್ನು ಮಂಡಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ ಇದಕ್ಕೆ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ.
ಇದರ ಮಧ್ಯೆ ಅರುಣಾಚಲ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಪಿಪಿ) ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಬಿಜೆಪಿಯ ಮಿತ್ರ ಪಕ್ಷ ನ್ಯಾಷನಲ್ ಪೀಪಲ್ಸ್ ಪಾರ್ಟಿ ಘೋಷಿಸಿದ್ದು, ಬಿಜೆಪಿಯ ಅಭಿವೃದ್ಧಿ ಕಾರ್ಯಗಳಿಗೆ ಮಾತ್ರ ನಮ್ಮ ಬೆಂಬಲ ಇರಲಿದೆ ಎಂದು ತಿಳಿಸಿದೆ.
ಈ ಕುರಿತಂತೆ ಮಾತನಾಡಿರುವ ನ್ಯಾಷನಲ್ ಪೀಪಲ್ಸ್ ಪಾರ್ಟಿ ಪ್ರಧಾನ ಕಾರ್ಯದರ್ಶಿ ಪಾಕ್ನ್ ಗಾ, ಈಶಾನ್ಯ ರಾಜ್ಯಗಳಲ್ಲಿನ ಬುಡಕಟ್ಟು ಸಮುದಾಯ ವೈವಿಧ್ಯಮಯ ಸಂಸ್ಕೃತಿ ಹೊಂದಿದ್ದು, ಹಲವು ಸಂಪ್ರದಾಯಗಳನ್ನು ನಿತ್ಯ ಜೀವನದಲ್ಲಿ ಪಾಲಿಸುತ್ತಿದೆ. ಯುಪಿಪಿ ಜಾರಿಯಾದರೆ ಇದಕ್ಕೆ ತೊಡಕುಂಟಾಗಲಿದ್ದು, ಹೀಗಾಗಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.