ನವದೆಹಲಿ: ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದು 9 ತಿಂಗಳು ಪೂರ್ಣಗೊಳಿಸಿದ ಎಲ್ಲಾ ವಯಸ್ಕರು ಏ.10ರಿಂದ ಬೂಸ್ಟರ್ ಡೋಸ್ ಪಡೆಯಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವಯಸ್ಕರರು ಮೂರನೇ ಡೋಸ್ ಅಥವಾ ಮುಂಜಾಗೃತಾ ಲಸಿಕೆ ಬೂಸ್ಟರ್ ಡೋಸ್ ಪಡೆಯಲು ಭಾನುವಾರದಿಂದ ಖಾಸಗಿ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದು ಸಚಿವಾಲಯ ತಿಳಿಸಿದೆ.
ಈವರೆಗೆ 15 ವರ್ಷಕ್ಕಿಂತ ಮೇಲ್ಪಟ್ಟ ಸುಮಾರು ಶೇ.96ರಷ್ಟು ಫಲಾನುಭವಿಗಳು ಒಂದು ಡೋಸ್ ಲಸಿಕೆ ಪಡೆದಿದ್ದು, ಅವರಲ್ಲಿ ಶೇ.83ರಷ್ಟು ಜನ ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ಆರೋಗ್ಯ ಕಾರ್ಯಕರ್ತರು, ಮುಂಚೂಣಿಯ ಕಾರ್ಯಕರ್ತರು, ಹಿರಿಯ ನಾಗರಿಕರಿಗೆ 2.4 ಕೋಟಿಗೂ ಹೆಚ್ಚು ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.