alex Certify ಏಪ್ರಿಲ್ 10 ರಂದು’777 ಚಾರ್ಲಿ’ ಚಿತ್ರತಂಡದಿಂದ ಬಿಡುಗಡೆ ದಿನಾಂಕ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಪ್ರಿಲ್ 10 ರಂದು’777 ಚಾರ್ಲಿ’ ಚಿತ್ರತಂಡದಿಂದ ಬಿಡುಗಡೆ ದಿನಾಂಕ ಘೋಷಣೆ

ಕಿರಣ್ ರಾಜ್ ನಿರ್ದೇಶನದ, ರಕ್ಷಿತ್ ಶೆಟ್ಟಿ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘777 ಚಾರ್ಲಿ’ ಬಿಡುಗಡೆ ದಿನಾಂಕ ಏಪ್ರಿಲ್ 10 ರಂದು ಬೆಳಿಗ್ಗೆ 11:04ಕ್ಕೆ ಘೋಷಣೆಯಾಗಲಿದೆ.

ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದೆ. ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಈ ಚಿತ್ರ ತೆರೆಕಾಣಲಿದೆ. ಈಗಾಗಲೇ ಈ ಸಿನಿಮಾ ಟೀಸರ್ 5 ಭಾಷೆಗಳಲ್ಲೂ ಸಾಕಷ್ಟು ಸದ್ದು ಮಾಡಿದೆ.

ಕಾಮಿಡಿ ಡ್ರಾಮಾ ಆಧಾರಿತ ಈ ಚಿತ್ರಕ್ಕೆ ನೋಬಿನ್ ಪೌಲ್ ಸಂಗೀತ ಸಂಯೋಜನೆ ನೀಡಿದ್ದು, ರಾಜ್ ಬಿ ಶೆಟ್ಟಿ, ಸಂಗೀತಾ ಶೃಂಗೇರಿ, ಡ್ಯಾನಿಶ್ ಸೇಠ್, ಬಾಬಿ ಸಿಂಹ ಸೇರಿದಂತೆ ಮೊದಲಾದ ಕಲಾವಿದರು ಬಣ್ಣಹಚ್ಚಿದ್ದಾರೆ. ಪರಂವಾ ಸ್ಟುಡಿಯೋಸ್ ಬ್ಯಾನರ್ ನಡಿ ಜಿ ಎಸ್ ಗುಪ್ತಾ, ರಕ್ಷಿತ್ ಶೆಟ್ಟಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...