
ಈಗಾಗಲೇ ಟೈಟಲ್ ಮೂಲಕವೇ ಸಾಕಷ್ಟು ಸದ್ದು ಮಾಡಿರುವ ಅಜಯ್ ರಾವ್ ಹಾಗೂ ಸಂಜನಾ ಆನಂದ್ ಅಭಿನಯದ ಬಹುನಿರೀಕ್ಷಿತ ‘ಶೋಕಿವಾಲಾ’ ಸಿನಿಮಾ ಏಪ್ರಿಲ್ 29ರಂದು ತೆರೆಕಾಣಲಿದೆ.
ಜಾಕಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಡಾ.ಟಿ ಆರ್ ಚಂದ್ರಶೇಖರ್ ನಿರ್ಮಾಣ ಮಾಡಿದ್ದಾರೆ. ಶ್ರೀಧರ್ ವಿ ಸಂಭ್ರಮ್ ಸಂಗೀತ ಸಂಯೋಜನೆ ನೀಡಿದ್ದಾರೆ.
ನದಿಯಲ್ಲಿ ಮೊಸಳೆಗಳೊಂದಿಗೆ ಕಾದಾಟಕ್ಕಿಳಿದ ಸಿಂಹ..! ವಿಡಿಯೋ ವೈರಲ್
ಈ ಚಿತ್ರದಲ್ಲಿ ತಬಲಾ ನಾಣಿ, ಪ್ರಮೋದ್ ಶೆಟ್ಟಿ, ಅರುಣ ಬಾಲರಾಜ್, ಲಾಸ್ಯ ಹಾಗೂ ಶರತ್ ಲೋಹಿತಾಶ್ವ ಸೇರಿದಂತೆ ಮೊದಲಾದ ಕಲಾವಿದರು ತೆರೆಹಂಚಿಕೊಂಡಿದ್ದಾರೆ. ಸ್ಟಲ್ ಪಾರ್ಕ್ ಸಿನಿಮಾಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಸಿನಿಮಾ ಹಾಡುಗಳು ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿವೆ.
