ಏರ್ಟೆಲ್ ಬಳಕೆದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶೀಘ್ರದಲ್ಲಿಯೇ ಮೊಬೈಲ್ ಸೇವಾ ಶುಲ್ಕಗಳನ್ನು ಎಲ್ಲ ಹಂತಗಳಲ್ಲಿ ಹೆಚ್ಚಿಸುವ ಮುನ್ಸೂಚನೆಯನ್ನು ಭಾರ್ತಿ ಏರ್ಟೆಲ್ ಅಧ್ಯಕ್ಷ ಸುನಿಲ್ ಭಾರತಿ ಮಿತ್ತಲ್ ನೀಡಿದ್ದಾರೆ.
ಬಾರ್ಸಿಲೋನಾದಲ್ಲಿ ನಡೆಯುತ್ತಿರುವ ಮೊಬೈಲ್ ವರ್ಲ್ಡ್ ಕಾಂಗ್ರೆಸ್ ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಸ್ತುತ ಹೂಡಿಕೆ ಮಾಡಿದ ಬಂಡವಾಳಕ್ಕೆ ಸಿಗುತ್ತಿರುವ ವರಮಾನ ಅತ್ಯಂತ ಕಡಿಮೆ ಇದೆ. ಹೀಗಾಗಿ ಸೇವಾ ಶುಲ್ಕವನ್ನು ಹೆಚ್ಚಿಸಲಾಗುತ್ತದೆ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಏರ್ಟೆಲ್ ಆರಂಭಿಕ ಹಂತದ ಮೊಬೈಲ್ ಸೇವಾ ಶುಲ್ಕವನ್ನು 155 ರೂಪಾಯಿಗಳಿಗೆ ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಹಂತಗಳಲ್ಲಿಯೂ ಸೇವಾ ಶುಲ್ಕ ಹೆಚ್ಚಳವಾಗಲಿದೆ. ಪ್ರಸ್ತುತ ಭಾರತದಲ್ಲಿ ಅತಿ ಕಡಿಮೆ ದರಕ್ಕೆ ಡೇಟಾ ಲಭ್ಯವಾಗುತ್ತಿದೆ ಎಂದು ಹೇಳಲಾಗಿದೆ.