ರಾಜ್ಯದಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಬಹುತೇಕ ಎಲ್ಲ ನದಿಗಳು ಉಕ್ಕಿ ಹರಿಯುತ್ತಿವೆ. ಇದರ ಪರಿಣಾಮ ಹೊಲ, ಗದ್ದೆಗಳಲ್ಲಿ ನೀರು ನಿಂತಿದ್ದು ಬೆಳೆ ಸಂಪೂರ್ಣವಾಗಿ ನಾಶವಾಗಿದೆ.
ಆಸ್ತಿಪಾಸ್ತಿಯ ನಷ್ಟ ಸಹ ಸಂಭವಿಸಿದ್ದು, ಜೊತೆಗೆ ಜೀವ ಹಾನಿಯೂ ಆಗಿದೆ. ಅಲ್ಲದೆ ಮರಗಳು ರಸ್ತೆ ಮೇಲೆ ಉರುಳಿ ಬಿದ್ದಿರುವ ಪರಿಣಾಮ ಸಂಚಾರ ಸಹ ಅಸ್ತವ್ಯಸ್ಥಗೊಂಡಿದೆ.
ಇದರ ಮಧ್ಯೆ ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸೂಳೆಕೆರೆ ಭರ್ತಿಯಾಗಿದ್ದು, ಬುಧವಾರದಂದು ಕೋಡಿಬಿದ್ದು ನೀರು ಹೊರ ಹರಿಯುತ್ತಿದೆ. ಇದನ್ನು ವೀಕ್ಷಿಸಲು ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.