alex Certify ಏಷ್ಯಾ ಕಪ್‌ನಲ್ಲಿ ಸೆ.2 ರಂದು ಭಾರತ-ಪಾಕ್‌ ಹಣಾಹಣಿ; ಇಲ್ಲಿದೆ ಹೈ ವೋಲ್ಟೇಜ್‌ ಪಂದ್ಯದ ಲೈವ್‌ ವೀಕ್ಷಣೆ ಕುರಿತ ಸಂಪೂರ್ಣ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಷ್ಯಾ ಕಪ್‌ನಲ್ಲಿ ಸೆ.2 ರಂದು ಭಾರತ-ಪಾಕ್‌ ಹಣಾಹಣಿ; ಇಲ್ಲಿದೆ ಹೈ ವೋಲ್ಟೇಜ್‌ ಪಂದ್ಯದ ಲೈವ್‌ ವೀಕ್ಷಣೆ ಕುರಿತ ಸಂಪೂರ್ಣ ವಿವರ

ಏಷ್ಯಾ ಕಪ್ನಲ್ಲಿ ಹೈವೋಲ್ಟೇಜ್‌ ಪಂದ್ಯವನ್ನು ನೋಡಲು ಇಡೀ ವಿಶ್ವವೇ ಕಾದಿದೆ. ಸಪ್ಟೆಂಬರ್‌ 2ರಂದು ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯಲಿದೆ.

ಈ ಪಂದ್ಯ ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ನಡೆಯಲಿದೆ. ಇದು ಏಷ್ಯಾಕಪ್‌ನಲ್ಲಿ ಭಾರತಕ್ಕೆ ಮೊದಲ ಮ್ಯಾಚ್‌. ಪಾಕಿಸ್ತಾನ ತನ್ನ ಮೊದಲ ಪಂದ್ಯವನ್ನು ನೇಪಾಳದ ವಿರುದ್ಧ ಆಡಿದೆ. ಇದಕ್ಕೂ ಮುನ್ನ 2022ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು, ಅದರಲ್ಲಿ ಭಾರತ ಗೆಲುವು ಸಾಧಿಸಿತ್ತು.

ಸೆಪ್ಟೆಂಬರ್ 2 ರಂದು ಏಷ್ಯಾ ಕಪ್‌ನಲ್ಲಿ ನಡೆಯಲಿರುವ ಇಂಡೋ-ಪಾಕ್ ಮೆಗಾ ಪಂದ್ಯವನ್ನು ನೀವು ಯಾವಾಗ, ಎಲ್ಲಿ ಮತ್ತು ಹೇಗೆ ಉಚಿತವಾಗಿ ವೀಕ್ಷಿಸಬಹುದು ಎಂಬುದನ್ನು ನೋಡೋಣ. ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಸೆಪ್ಟೆಂಬರ್ 2ರ ಶನಿವಾರ ನಡೆಯಲಿದೆ. ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. 2:30ಕ್ಕೆ ಟಾಸ್ ಎಸೆಯಲಾಗುವುದು. 

ಭಾರತದಲ್ಲಿ ಟಿವಿ ಮೂಲಕ IND vs PAK ಪಂದ್ಯವನ್ನು ಲೈವ್ ಆಗಿ ವೀಕ್ಷಿಸುವುದು ಹೇಗೆ ?

ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯಲಿರುವ ಈ ಪಂದ್ಯ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರವಾಗಲಿದೆ. ಅಷ್ಟೇ ಅಲ್ಲ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಮೂಲಕ ಉಚಿತವಾಗಿ ಪಂದ್ಯವನ್ನು ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಆದಾಗ್ಯೂ ಉಚಿತ ಲೈವ್ ಸ್ಟ್ರೀಮಿಂಗ್ ಮೊಬೈಲ್ ಬಳಕೆದಾರರಿಗೆ ಮಾತ್ರ ಲಭ್ಯವಿರುತ್ತದೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್, ಸೂರ್ಯಕುಮಾರ್ ಯಾದವ್ , ಪ್ರಸಿದ್ಧ ಕೃಷ್ಣ. ಮೀಸಲು ಆಟಗಾರ- ಸಂಜು ಸ್ಯಾಮ್ಸನ್.

ಪಾಕಿಸ್ತಾನ ತಂಡ

ಫಖರ್ ಜಮಾನ್, ಇಮಾಮ್ ಉಲ್ ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಫಹೀಮ್ ಅಶ್ರಫ್, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ವಾಸಿಮ್ ಜೂನಿಯರ್, ಅಬ್ದುಲ್ಲಾ ಶಫೀಕ್, ಉಸಾಮಾ ಮಿರ್, ಸೌದ್ ನಜ್ವಾಜ್, ಮೊಹಮ್ಮದ್ ಶಕೀಲ್ , ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...