ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಲು ಈಗಾಗಲೇ ಹಲವು ಬಾರಿ ಗಡುವು ವಿಸ್ತರಿಸಲಾಗಿದ್ದರೂ ಸಹ ಈವರೆಗೆ ಬಹಳಷ್ಟು ಮಂದಿ ತಮ್ಮ ಪಾನ್ ಕಾರ್ಡ್ ಗಳನ್ನು ಆಧಾರ್ ಜೊತೆ ಲಿಂಕ್ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಮಹತ್ವದ ಸೂಚನೆಯನ್ನು ನೀಡಿದೆ.
ಆದಾಯ ತೆರಿಗೆ ಇಲಾಖೆ ಕಾಯ್ದೆ 1961ರ ಅನ್ವಯ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, ಇದಕ್ಕಾಗಿ 2023ರ ಮಾರ್ಚ್ 31 ಅಂತಿಮ ದಿನಾಂಕವಾಗಿದೆ. ಒಂದು ವೇಳೆ ಈ ಅವಧಿಯೊಳಗೆ ಆಧಾರ್ ಜೊತೆ ಪಾನ್ ಲಿಂಕ್ ಮಾಡದಿದ್ದರೆ ಏಪ್ರಿಲ್ 1ರಿಂದ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ.
ಈಗಾಗಲೇ ಹಲವು ಬಾರಿ ಗಡುವು ನೀಡಿದ್ದ ಆದಾಯ ತೆರಿಗೆ ಇಲಾಖೆ ಇದೀಗ ಒಂದು ಸಾವಿರ ರೂಪಾಯಿ ಪಾವತಿಸಿ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಲು ಅವಕಾಶ ನೀಡಿದ್ದು, ಒಂದು ವೇಳೆ ಇದನ್ನು ಸಹ ಸದುಪಯೋಗಪಡಿಸಿಕೊಳ್ಳದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುವುದು ಖಚಿತವಾಗಿದೆ. ಪಾನ್ ಕಾರ್ಡ್ ನಿಷ್ಕ್ರಿಯವಾದರೆ ಬ್ಯಾಂಕ್ ಖಾತೆ ವಹಿವಾಟು ನಡೆಸುವುದೂ ಸೇರಿದಂತೆ ಹಲವು ಕಾರ್ಯಗಳಿಗೆ ತೊಂದರೆಯಾಗಲಿದೆ.