ಎಂಟು ತಿಂಗಳ ಹಿಂದಷ್ಟೇ ಸುಮಾರು 1.20 ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗಿದ್ದ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಐತಿಹಾಸಿಕ ಬನಶಂಕರಿ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದಿದ್ದು, ಇದು ಅಪಶಕುನವೆಂದು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ಗೋಪುರಕ್ಕೆ ಸಿಡಿಲು ಬಡಿದ ಸಂದರ್ಭದಲ್ಲಿ ಎಂಟು ಜನ ಸ್ಥಳದಲ್ಲಿದ್ದರು ಎನ್ನಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓರ್ವನಿಗೆ ಸಿಮೆಂಟ್ ತುಣುಕುಗಳು ತಾಗಿದ ಪರಿಣಾಮ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋಪುರಕ್ಕೆ ಸಿಡಿಲು ಬಡಿದ ಘಟನೆಯಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ನಿರ್ಮಾಣ ಹಂತದಲ್ಲಿ ಅಪಚಾರ ಆಗಿರಬಹುದು ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಸಿಡಿಲು ಬಡಿದರೂ ಸಹ ಯಾರಿಗೂ ಯಾವುದೇ ಅಪಾಯವಾಗದ ಕಾರಣ ಸಮಾಧಾನ ಮೂಡಿಸಿದೆ.