ಐಫೋನ್ ಹೊಂದಬೇಕೆಂಬುದು ಬಹುತೇಕ ಎಲ್ಲರ ಕನಸಾಗಿರುತ್ತದೆ. ಆದರೆ ಇದರ ದುಬಾರಿ ಬೆಲೆಯ ಕಾರಣಕ್ಕಾಗಿ ಇದು ನನಸಾಗುವುದು ಕೆಲವೊಬ್ಬರಿಗೆ ಮಾತ್ರ. ಇದರ ಮಧ್ಯೆ ಐಫೋನ್ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಶುಭ ಸುದ್ದಿಯೊಂದು ಇಲ್ಲಿದೆ.
ಹೌದು, ಅಮೆರಿಕ ಮೂಲದ ಆಪಲ್ ಕಂಪನಿ ಮುಂದಿನ ದಿನಗಳಲ್ಲಿ ಭಾರತದಲ್ಲಿಯೇ ತನ್ನ ಮೊಬೈಲ್ ಉತ್ಪಾದನೆಯ ಪ್ರಮಾಣವನ್ನು ಹೆಚ್ಚಿಸಲು ತೀರ್ಮಾನಿಸಿದ್ದು, ಇದರಿಂದಾಗಿ ಐಫೋನ್ ಗಳು ಅಗ್ಗದ ಬೆಲೆಯಲ್ಲಿ ಲಭ್ಯವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ.
ಪ್ರಸಕ್ತ ಹಣಕಾಸು ವರ್ಷದಲ್ಲಿಯೇ ಭಾರತದಲ್ಲಿ ಸುಮಾರು 47 ಸಾವಿರ ಕೋಟಿ ರೂಪಾಯಿ ಮೌಲ್ಯದ ಐಫೋನ್ ಗಳನ್ನು ಉತ್ಪಾದಿಸುವ ಗುರಿಯನ್ನು ಕಂಪನಿ ಹೊಂದಿದ್ದು, ಹೀಗಾಗಿ ಇವುಗಳ ಬೆಲೆ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.