ದುಬೈ: 2021ರ ಐಸಿಸಿ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಭಾರತೀಯ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂದನಾ ಆಯ್ಕೆಯಾಗಿದ್ದಾರೆ.
ಅಲ್ಲದೇ, ಈ ಮೂಲಕ ಮಂದನಾ ಎರಡು ಬಾರಿ ಈ ಪ್ರಶಸ್ತಿ ಪಡೆದ ಭಾರತೀಯ ಏಕೈಕ ಆಟಗಾರ್ತಿ ಎಂಬ ದಾಖಲೆಯನ್ನು ಕೂಡ ಬರೆದಿದ್ದಾರೆ. ಇದಕ್ಕೂ ಮೊದಲು ಅವರು 2018ರಲ್ಲಿ ಈ ಪ್ರಶಸ್ತಿ ಸ್ವೀಕರಿಸಿದ್ದರು.
2021ರಲ್ಲಿ ಸ್ಮೃತಿ ಮಂದನಾ 22 ಪಂದ್ಯಗಳನ್ನಾಡಿ ಒಂದು ಶತಕ ಹಾಗೂ ಐದು ಅರ್ಧ ಶತಕಗಳೊಂದಿಗೆ 855 ರನ್ ಗಳನ್ನು ಗಳಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆದಿದ್ದ ಏಕೈಕ ಟೆಸ್ಟ್ ನಲ್ಲಿ 78 ರನ್ ಗಳಿಸಿ ಟೆಸ್ಟ್ ಪಂದ್ಯ ಡ್ರಾ ಆಗುವಲ್ಲಿ ಶ್ರಮ ವಹಿಸಿದ್ದರು.
ಇದರೊಂದಿ ಸ್ಮೃತಿ ಅವರು ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಲ್ಲಿ ನಡೆದ ಟಿ20 ಲೀಗ್ ಗಳಲ್ಲಿ ಕೂಡ ಉತ್ತಮ ಪ್ರದರ್ಶನ ತೋರಿದ್ದಾರೆ. ಆಡಿದ 7 ಪಂದ್ಯಗಳಲ್ಲಿ 167 ರನ್ ಸಿಡಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ನಡೆದ ಪಿಂಕ್ ಬಾಲ್ ಟೆಸ್ಟ್ ನಲ್ಲಿ 127 ರನ್ ಗಳನ್ನು ಸಿಡಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಸಾಧನೆ ಮಾಡಿದ್ದರು. ಈ ಮೂಲಕ ಮಹಿಳಾ ಕ್ರಿಕೆಟ್ ಅಂಗಳದಲ್ಲಿ ಉತ್ತಮ ಪ್ರದರ್ಶನ ತೋರಿ ಐಸಿಸಿ ವರ್ಷದ ಮಹಿಳಾ ಪ್ರಶಸ್ತಿಯನ್ನು ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.