
ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಐಸಿಸಿ ಏಕದಿನ ಬ್ಯಾಟ್ಸ್‌ಮನ್ ಗಳ ಪಟ್ಟಿಯಲ್ಲಿ ಮೊದಲನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಮಿಥಾಲಿ ರಾಜ್ 762 ಅಂಕಗಳನ್ನು ಪಡೆದುಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ಆಟಗಾರ್ತಿ ಲಿಜೆಲ್ಲಿ ಲೀ ಕೂಡ ಇದೇ ಅಂಕದಲ್ಲಿದ್ದು ಈ ಆಟಗಾರ್ತಿ ಕೂಡ ನಂಬರ್ 1 ಸ್ಥಾನದಲ್ಲಿದ್ದಾರೆ .
ಭಾರತದ ಮತ್ತೊಬ್ಬ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದನಾ ಐಸಿಸಿ ಮಹಿಳಾ ಏಕದಿನ ಬ್ಯಾಟ್ಸ್‌ಮನ್ ಗಳ ರ್ಯಾಂಕಿಂಗ್ ನಲ್ಲಿ 9 ನೇ ಸ್ಥಾನದಲ್ಲಿದ್ದಾರೆ. ಇನ್ನು ಬೌಲರ್ ಗಳ ಪಟ್ಟಿಯಲ್ಲಿ ಜೂಲನ್ ಗೋಸ್ವಾಮಿ 5ನೇ ಸ್ಥಾನದಲ್ಲಿದ್ದಾರೆ