ಒಂದೆಲಗ ಅಥವಾ ಬ್ರಾಹ್ಮಿ ಔಷಧಿಯಾಗಿಯೂ, ಆಹಾರವಾಗಿಯೂ ಉಪಯೋಗಕ್ಕೆ ಬರುವ ಒಂದು ಸಸ್ಯ. ಹೆಸರೇ ಸೂಚಿಸುವಂತೆ ಒಂದೇ ಎಲೆಯಿಂದ ಕಂಗೊಳಿಸುತ್ತದೆ. ಇದು ನೆಲದಲ್ಲಿ ನೀರಿನ ಆಶ್ರಯವಿರುವಲ್ಲಿ ಹೆಚ್ಚಾಗಿ ಬೆಳೆಯುತ್ತದೆ.
ಇದರ ಉಪಯೋಗಗಳು ತಿಳಿದರೆ ಖಂಡಿತ ಈ ಸಸ್ಯವನ್ನು ಮನೆಯಲ್ಲಿ ಬೆಳೆಸುತ್ತೀರಿ. ಇಲ್ಲಿವೆ ಇದರ ಪ್ರಯೋಜನಗಳು.
* ಕೆಮ್ಮು, ಉಸಿರಾಟದ ತೊಂದರೆ ಇರುವವರು ಇದರ ರಸವನ್ನು ಜೇನು ತುಪ್ಪದೊಂದಿಗೆ ಬೆರೆಸಿ ಸೇವಿಸಬಹುದು.
* ಒಂದೆಲಗ ಸೇವನೆ ದೇಹಕ್ಕೆ, ಮನಸ್ಸಿಗೆ ತಂಪು ತರುವುದು ಮಾತ್ರವಲ್ಲದೆ ಸ್ಮರಣಶಕ್ತಿಯನ್ನೂ ವರ್ಧಿಸುತ್ತದೆ ಎಂಬ ನಂಬಿಕೆಯಿದೆ.
* ನಿತ್ಯ ತಿಂದರೆ ಬುದ್ಧಿ ಚುರುಕಾಗುತ್ತದೆ. ಮಕ್ಕಳಿಗೆ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದರ ಎರಡೆರಡು ಎಲೆಗಳನ್ನು ತಿನ್ನಲು ಕೊಡುವುದರಿಂದ ಮಕ್ಕಳ ಜ್ಞಾಪಕಶಕ್ತಿ ಹೆಚ್ಚುತ್ತದೆ.
* ದಿನಕ್ಕೆ 4 -5 ಎಲೆ ಸೇವಿಸುವುದರಿಂದ ಮಾತಿನ ಉಗ್ಗುವಿಕೆ ಇಲ್ಲವಾಗುತ್ತದೆ.
* ಮಲಬದ್ದತೆಯಿಂದ ಬಳಲುವವರು ಒಂದೆಲಗದ ಸೊಪ್ಪಿನಿಂದ ತಯಾರಿಸಿದ ಪಲ್ಯ ಅಥವಾ ಚಟ್ನಿ ಸೇವಿಸಬಹುದು.
* ಒಂದೆಲಗ ರೋಗ ನಿವಾರಕವು ಹೌದು. ಒಂದೆಲಗ ಸೊಪ್ಪನ್ನು ಚೆನ್ನಾಗಿ ಒಣಗಿಸಿ ಪುಡಿಮಾಡಿ ಮಧುಮೇಹಿಗಳಿಗೆ ದಿನನಿತ್ಯ ನೀಡಿದರೆ ಸಕ್ಕರೆ ಕಾಯಿಲೆಯನ್ನೂ ನಿಯಂತ್ರಿಸಬಹುದು.
* ಒಂದೆಲಗ ಸೊಪ್ಪನ್ನು ಚೆನ್ನಾಗಿ ಅರೆದು ತಲೆಗೆ ಹಚ್ಚಿ ಎರಡು ಗಂಟೆಗಳ ಬಳಿಕ ಸ್ನಾನ ಮಾಡಿದರೆ ತಲೆಹೊಟ್ಟು ಕಡಿಮೆಯಾಗುತ್ತದೆ.