ಬೆಂಗಳೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕಾ ಸಂಪಾದಕ ಶಂಕರ್ ಹಾಗೂ ಇಬ್ಬರು ಅಳಿಯಂದಿರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶ ನೀಡಿದೆ.
ಹಲ್ಲೆಗೆರೆ ಶಂಕರ್ ಹಾಗೂ ಅವರ ಇಬ್ಬರು ಅಳಿಯಂದಿರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಕೇಸ್ ದಾಖಲಾಗಿತ್ತು. ಪ್ರಕರಣ ಸಂಬಂಧ ಶಂಕರ್ ಹಾಗೂ ಇಬ್ಬರು ಅಳಿಯಂದಿರನ್ನು ಪೊಲೀಸರು ಬಂಧಿಸಿದ್ದರು. ಮೂವರು ಆರೋಪಿಗಳು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ.
BIG NEWS: ಅವಹೇಳನಕಾರಿ ಹೇಳಿಕೆ; ಬಿಜೆಪಿ ಮುಖಂಡ ಸಂಜಯ್ ಪಾಟೀಲ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು
ಇತ್ತೀಚೆಗಷ್ಟೇ ಬೆಂಗಳೂರಿನ ಬ್ಯಾಡರಹಳ್ಳಿ ಐಷಾರಾಮಿ ಮನೆಯೊಂದರಲ್ಲಿ ಹಲ್ಲೆಗೆರೆ ಶಂಕರ್ ಕುಟುಂಬದ ಐವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿದ್ದರು. ಶಂಕರ್ ಪತ್ನಿ ಭಾರತಿ, ಮಕ್ಕಳಾದ ಸಿಂಚನಾ, ಸಿಂಧೂರಾಣಿ, ಮಗ ಮಧುಸಾಗರ್ ಹಾಗೂ 9 ತಿಂಗಳ ಮಗು ಸಾವಿಗೆ ಶರಣಾಗಿದ್ದರು. ಶಂಕರ್ ಹಾಗೂ ಆತನ ಅಳಿಯಂದಿರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿತ್ತು.