alex Certify ಒಂದೇ ಶಾಲೆಯ 68 ವಿದ್ಯಾರ್ಥಿಗಳು, 7 ಜನ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಶಾಲೆಯ 68 ವಿದ್ಯಾರ್ಥಿಗಳು, 7 ಜನ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ಕೊರೊನಾ ಆತಂಕದ ಮಧ್ಯೆಯೇ ಸರ್ಕಾರವು ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿ ಶಾಲೆಗಳನ್ನು ಆರಂಭಿಸಿದೆ. ಆದರೆ, ಇಂದಿಗೂ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ.

ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಹೋತಪೇಟ ಎಂಬಲ್ಲಿನ ಜವಾಹರ ನವೋದಯ ಶಾಲೆಯ 7 ಜನ ಸಿಬ್ಬಂದಿ ಸೇರಿದಂತೆ 68 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.

ಈ ಶಾಲೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿನ ಸುಮಾರು 35 ಜನ ಸಿಬ್ಬಂದಿ ಹಾಗೂ 528 ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ 7 ಜನ ಸಿಬ್ಬಂದಿ ಹಾಗೂ 68 ಜನ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸೋಂಕಿತ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಸೋಂಕಿನ ಗಂಭೀರತೆ ಕಂಡು ಬಂದಿಲ್ಲ. ಸೌಮ್ಯ ಲಕ್ಷಣಗಳು ಕಂಡು ಬಂದಿದ್ದು, ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ, ಈ ಶಾಲೆಗೆ ಒಂದು ವಾರ ರಜೆ ಘೋಷಿಸಲಾಗಿದೆ.

ಹಲವು ವಿದ್ಯಾರ್ಥಿಗಳು ಪಾಲಕರೊಂದಿಗೆ ಮನೆಗೆ ತೆರಳಿ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಆರ್. ಅವರು ವೈದ್ಯಾಧಿಕಾರಿಗಳೊಂದಿಗೆ ಶಾಲೆಗೆ ಆಗಮಿಸಿ, ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ, ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...