ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮ ಕಾಂಗ್ರೆಸ್ ನಲ್ಲಿದ್ದು, ಹೀಗಾಗಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಅಧ್ಯಕ್ಷೀಯ ಚುನಾವಣೆಯಲ್ಲಿ ಅವರು ಶಶಿ ತರೂರ್ ಅವರನ್ನು ಮಣಿಸಿ ಎಐಸಿಸಿಗೆ ಆಯ್ಕೆಯಾಗಿದ್ದು, ರಾಜ್ಯಸಭಾ ನಾಯಕನ ಸ್ಥಾನಕ್ಕೆ ಮತ್ತೊಬ್ಬರನ್ನು ಕಾಂಗ್ರೆಸ್ ವತಿಯಿಂದ ನೇಮಕ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದವು.
ಆದರೆ ಮಲ್ಲಿಕಾರ್ಜುನ ಖರ್ಗೆಯವರ ವಿಷಯದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮದಿಂದ ವಿನಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಸಂಸತ್ತಿನ ಚಳಿಗಾಲದ ಅಧಿವೇಶನದ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರೇ ರಾಜ್ಯಸಭಾ ವಿಪಕ್ಷ ನಾಯಕನ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ.