alex Certify ಒಡಿಶಾ ರೈಲು ದುರಂತ: ಕನ್ನಡಿಗರ ಸುರಕ್ಷತೆಗಾಗಿ ಸಚಿವ ಸಂತೋಷ್ ಲಾಡ್ ನಿಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಡಿಶಾ ರೈಲು ದುರಂತ: ಕನ್ನಡಿಗರ ಸುರಕ್ಷತೆಗಾಗಿ ಸಚಿವ ಸಂತೋಷ್ ಲಾಡ್ ನಿಯೋಜನೆ

ಒಡಿಶಾ ರೈಲು ದುರಂತದ (Odisha Train Tragedy) ಹಿನ್ನೆಲೆ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲೆಂದು ಸಚಿವ ಸಂತೋಷ್ ಲಾಡ್ ರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ.

ರೈಲು ದುರಂತದ ಬಗ್ಗೆ ಸರ್ಕಾರದ ಕಾರ್ಯದರ್ಶಿಯವರಿಂದ ವರದಿ ಪಡೆದ ಸಿಎಂ ಸಿದ್ದರಾಮಯ್ಯ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ರನ್ನು ನಿಯೋಜಿಸಿದ್ದಾರೆ.

ಸಚಿವ ಸಂತೋಷ್ ಲಾಡ್ ಹಾಗೂ ಅವರ ಜೊತೆಗೆ ವಿಪತ್ತು ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಹಾಗೂ ಇತರೆ ಅಧಿಕಾರಿಗಳ ತಂಡ ದುರಂತ ನಡೆದ ಸ್ಥಳಕ್ಕೆ ಹೊರಟಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಒಡಿಶಾದ ಬಾಲಸೋರ್ ಪ್ರದೇಶದಲ್ಲಿ ನಿನ್ನೆ ಭೀಕರ ರೈಲು ಅಪಘಾತ (railway accident) ನಡೆದಿದ್ದು, ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಹಾಗೂ ಗಾಯಾಳುಗಳಿಗೆ ಕೇಂದ್ರ ರೈಲ್ವೆ ಇಲಾಖೆ (Central Railway Department) ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...