alex Certify ಒಮಿಕ್ರಾನ್ ಬಗ್ಗೆ ಸುಮ್ನೆ ಭಯ ಹುಟ್ಟಿಸಲಾಗುತ್ತಿದೆ; ರಾಜ್ಯದಲ್ಲಿ ಅಂತಹ ವಾತಾವರಣವಿಲ್ಲ ಎಂದ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಮಿಕ್ರಾನ್ ಬಗ್ಗೆ ಸುಮ್ನೆ ಭಯ ಹುಟ್ಟಿಸಲಾಗುತ್ತಿದೆ; ರಾಜ್ಯದಲ್ಲಿ ಅಂತಹ ವಾತಾವರಣವಿಲ್ಲ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೊರೊನಾ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಬಗ್ಗೆ ಅನಗತ್ಯವಾಗಿ ಭಯದ ವಾತಾವರಣ ನಿರ್ಮಿಸುವ ಕೆಲಸವಾಗುತ್ತಿದೆ. ಮಾಧ್ಯಮಗಳಲ್ಲಿ ಕೇವಲ ಒಮಿಕ್ರಾನ್ ಸುದ್ದಿ ಬರುತ್ತಿದೆ. ಅಂತಹ ಭಯದ ವಾತಾವರಣ ನಮ್ಮಲ್ಲಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಒಮಿಕ್ರಾನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ವಿಚಾರವಾಗಿ ಮಾತನಾಡಿದ ಡಿ.ಕೆ. ಶಿವಕುಮಾರ್, ಯಾರೋ ಏರ್ ಪೋರ್ಟ್ ನಿಂದ ಓಡಿ ಹೋದ ಎನ್ನುವಂತಹ ಭಯದ ವಾತಾವರಣ ಸೃಷ್ಟಿಸುವ ಸುದ್ದಿಯಾಗುತ್ತಿದೆ. ಆ ರೀತಿ ವಾತಾವರಣ ರಾಜ್ಯದಲ್ಲಿ ಇಲ್ಲ ಎಂದರು.

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಗುಡ್​ ನ್ಯೂಸ್​: ಮುಂದಿನ ಮೂರು ವರ್ಷಗಳಲ್ಲಿ ಈ ವಲಯದಲ್ಲಾಗಲಿದೆ 70 ಸಾವಿರಕ್ಕೂ ಅಧಿಕ ನೇಮಕಾತಿ

ಬೆಂಗಳೂರಿನಲ್ಲಿ ಹಲವು ಉದ್ಯಮಗಳಿವೆ, ಐಟಿ ಕಂಪನಿಗಳಿವೆ. ಈಗಾಗಲೇ ಎಲ್ಲರೂ ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಎಲ್ಲದಕ್ಕೂ ಎಲ್ಲರೂ ಸರ್ಟಿಫಿಕೆಟ್ ತೋರಿಸಿ ಎಂಟ್ರಿ ಪಡೆಯಬೇಕು ಎಂದರೆ ಹೇಗೆ ? ಇಡೀ ದೇಶಕ್ಕೆ ಇಲ್ಲದ ರೂಲ್ಸ್ ಕರ್ನಾಟಕಕ್ಕೆ ಯಾಕೆ ? ದೇಶಕ್ಕೆಲ್ಲ ಒಂದೇ ರೀತಿಯ ನಿಯಮ ಇರಬೇಕು ಎಂದರು.

ಮೊದಲ ಹಾಗೂ ಎರಡನೇ ಅಲೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ಇನ್ನೂ ಯಾವುದೇ ಪರಿಹಾರ ನೀಡಿಲ್ಲ. ಈ ಬಗ್ಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...