ಬೆಂಗಳೂರು: ಒಮಿಕ್ರಾನ್ ಸೋಂಕಿತ ಅಂತರಾಷ್ಟ್ರೀಯ ಪ್ರಯಾಣಿಕರು ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಪಡೆಯಬಹುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಸುತ್ತೋಲೆ ಹೊರಡಿಸಿದ್ದು, ಅಧಿಕೃತ ಸಂಖ್ಯೆಯಲ್ಲಿ ಒಮಿಕ್ರಾನ್ ವರದಿಯಾದ ದೇಶಗಳನ್ನು ಅಪಾಯಕಾರಿ ಗುಂಪಿಗೆ ಸೇರಿಸಿದ್ದು, ಈ ದೇಶಗಳಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಆರ್ ಟಿ ಪಿ ಸಿ ಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.
SHOCKING NEWS: ಹೆಂಡತಿ ಚುಡಾಯಿಸಿದ್ದಕ್ಕೆ ಶಿಕ್ಷೆ; ಸೆಕ್ಯೂರಿಟಿ ಗಾರ್ಡ್ ಗೆ ಹಾಕಿ ಸ್ಟಿಕ್ ನಿಂದ ಥಳಿಸಿದ ಪತಿ
ಒಮಿಕ್ರಾನ್ ಸೋಂಕಿತರು ಹಾಗೂ ರೋಗ ಲಕ್ಷಣ ಕಂಡು ಬಂದವರಿಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ತಮ್ಮ ಸ್ವಂತ ಖರ್ಚಿನಲ್ಲಿ ನಿಗದಿತ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವ್ಯವಸ್ಥೆಯಡಿ ಚಿಕಿತ್ಸೆ ಪಡೆಯಲು ಅವಕಾಶವಿದೆ. ಆದರೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಇಲಾಖೆ ತಿಳಿಸಿದೆ.