alex Certify ಓಮಿಕ್ರಾನ್​​ ಹರಡುವಿಕೆ ವೇಗದ ಬಗ್ಗೆ ಬಯಲಾಯ್ತು ಆಘಾತಕಾರಿ ಮಾಹಿತಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಓಮಿಕ್ರಾನ್​​ ಹರಡುವಿಕೆ ವೇಗದ ಬಗ್ಗೆ ಬಯಲಾಯ್ತು ಆಘಾತಕಾರಿ ಮಾಹಿತಿ..!

ಕೋವಿಡ್​ ಮೂರನೇ ಅಲೆಯಲ್ಲಿ ದೇಶದಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆಯು 10 ಸಾವಿರದಿಂದ 1 ಲಕ್ಷಕ್ಕೆ ತಲುಪಲು ಕೇವಲ 8 ದಿನಗಳನ್ನು ತೆಗೆದುಕೊಂಡಿದೆ. ಆದರೆ 1 ವರ್ಷಗಳ ಹಿಂದೆ ಕೊರೊನಾ 2ನೇ ಅಲೆಯ ಸಂದರ್ಭದಲ್ಲಿ ದೇಶದಲ್ಲಿ 10000 ವಿದ್ದ ದೈನಂದಿನ ಪ್ರಕರಣಗಳ ಸಂಖ್ಯೆಯು 1 ಲಕ್ಷವಾಗಲು 47 ದಿನಗಳನ್ನು ತೆಗೆದುಕೊಂಡಿತ್ತು ಎನ್ನಲಾಗಿದೆ.

2020ರಲ್ಲಿ ಉಂಟಾದ ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ 10 ಸಾವಿರ ಪ್ರಕರಣ ದಿಂದ ಪ್ರತಿದಿನ ಲಕ್ಷಕ್ಕೂ ಅಧಿಕ ದೈನಂದಿನ ಪ್ರಕರಣಗಳನ್ನು ವರದಿ ಮಾಡಲು 103 ದಿನಗಳ ಕಾಲಾವಕಾಶವನ್ನು ತೆಗೆದುಕೊಳ್ಳಲಾಗಿತ್ತು.

ಈ ಮೇಲಿನ ದತ್ತಾಂಶಗಳನ್ನು ನೋಡಿದಾಗ ಓಮಿಕ್ರಾನ್​ ರೂಪಾಂತರಿಯು ಎಷ್ಟು ವೇಗವಾಗಿ ಹರಡುತ್ತಿದೆ ಎಂಬುದನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ. ಹೀಗಾಗಿ ಓಮಿಕ್ರಾನ್​ ರೂಪಾಂತರಿಯು ಹಿಂದಿನ ಎಲ್ಲಾ ರೂಪಾಂತರಿಗಳ ದಾಖಲೆಯನ್ನು ಮುರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಲ್ಲಿಯವರೆಗೆ ದೇಶದಲ್ಲಿ ಆಮ್ಲಜನಕ ಅಥವಾ ಆಸ್ಪತ್ರೆಗಳ ಕೊರತೆ ಎದುರಾಗಿಲ್ಲ. ಆದರೆ 1.3 ಶತಕೋಟಿ ಜನಸಂಖ್ಯೆಯನ್ನು ಹೊಂದಿರುವ ನಮ್ಮ ದೇಶದಲ್ಲಿ ಕೊರೊನಾ ಮೂರನೇ ಅಲೆಯು ಹರಡುತ್ತಿರುವ ವೇಗವನ್ನು ನೋಡಿದರೆ ಮುಂದಿನ ದಿನಗಳಲ್ಲಿ ಇದು ದೇಶದ ಆರೋಗ್ಯ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮವನ್ನು ಉಂಟುಮಾಡಬಹುದು ಎಂದು ಅಂದಾಜಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,17,170 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಒಟ್ಟು 3007 ಓಮಿಕ್ರಾನ್ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...