ಮೈಕ್ರೋವೇವ್ ಓವನ್ನಲ್ಲಿ ಎರಡು ತಿಂಗಳ ಮಗು ಶವದ ಸ್ಥಿತಿಯಲ್ಲಿ ಪತ್ತೆಯಾದ ಹೃದಯವಿದ್ರಾವಕ ಘಟನೆಯು ದಕ್ಷಿಣ ದೆಹಲಿಯ ಚಿರಾಗ್ ಪ್ರದೇಶದಲ್ಲಿ ನಡೆದಿದೆ.
ಎರಡು ತಿಂಗಳ ಮಗು ಸಾವನ್ನಪ್ಪಿರುವ ಬಗ್ಗೆ ಆಸ್ಪತ್ರೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನೆರೆಮನೆಯವರು ಮಗು ಓವನ್ನಲ್ಲಿ ಇದ್ದಿದ್ದನ್ನು ಗಮನಿಸಿದ್ದರು ಎನ್ನಲಾಗಿದೆ.
ಈ ಪ್ರಕರಣ ಸಂಬಂಧ ಪೊಲೀಸರು ಕೊಲೆ ಕೇಸು ದಾಖಲಿಸಿಕೊಂಡಿದ್ದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರನ್ನೂ ವಿಚಾರಣೆಗೊಳಪಡಿಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಮಗುವಿನ ತಾಯಿಯನ್ನು ಶಂಕಿತೆ ಎಂದು ಪೊಲೀಸರು ಗುರುತಿಸಿದ್ದಾರೆ. ಈಕೆಯನ್ನು ಪೊಲೀಸ್ ಠಾಣೆಗೆ ಕರೆತರಲಾಗಿದ್ದು ವಿಚಾರಣೆಗೊಳಪಡಿಸಲಾಗಿದೆ. ಈ ಕೃತ್ಯ ನಡೆಯುವ ವೇಳೆಯಲ್ಲಿ ಮಗುವಿನ ತಂದೆಯು ತನ್ನ ಅಂಗಡಿಯಲ್ಲಿದ್ದ ಎನ್ನಲಾಗಿದೆ.