alex Certify ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ʼಅಂತಿಮ ದರ್ಶನʼಕ್ಕೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ʼಅಂತಿಮ ದರ್ಶನʼಕ್ಕೆ ಅವಕಾಶ

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಿದ್ಧತೆ ನಡೆಸಲಾಗಿದೆ.

ಇಂದು ಸಂಜೆ 5 ಗಂಟೆಗೆ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಕಂಠೀರವ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಇಂದು ಸಂಜೆಯಿಂದ ನಾಳೆವರೆಗೂ ಅಭಿಮಾನಿಗಳಿಗೆ, ಸಾರ್ವಜನಿಕರಿಗೆ, ಪುನೀತ್ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ಅತಿ ಚಿಕ್ಕವಯಸ್ಸಿನಲ್ಲಿಯೇ ವಿಧಿವಶರಾಗಿರುವುದು ಇಡೀ ಕನ್ನಡ ನಾಡಿಗೆ, ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ. ಅಭಿಮಾನಿಗಳು, ಕುಟುಂಬದವರು ಯಾವುದೇ ಉದ್ವೇಗಕ್ಕೆ, ಆವೇಶಕ್ಕೆ ಒಳಗಾಗಬಾರದು, ಶಾಂತಿಯನ್ನು ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸಕಲ ಸರ್ಕಾರಿ ಗೌರವದೊಂದಿಗೆ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು. ಕುಟುಂಬದ ಸಂಸ್ಕಾರದಂತೆಯೇ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...