ಬೆಂಗಳೂರು: 3 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದವನು ಇದೀಗ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಇತ್ತೀಚೆಗೆ ಮೂರು ವರ್ಷದ ಕಂದನ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣ ಸುದ್ದಿಯಾಗಿತ್ತು. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತಲ್ಲದೇ ಬಂಧಿತ ಆರೋಪಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ.
ಇದೀಗ ಆರೋಪಿ ಖೈದಿ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.