ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಬೆಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.
ಗುರುವಾರದಂದು ಕಟ್ಟಡ ಕಾರ್ಮಿಕರ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪೈಲೆಟ್ ತರಬೇತಿ ಸೇರಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ.
ಪೈಲೆಟ್ ತರಬೇತಿಯ ಸಂಪೂರ್ಣ ವೆಚ್ಚವನ್ನು ಮಂಡಳಿಯೇ ಭರಿಸಲಿದೆ ಎಂದು ಹೇಳಿದ ಸಚಿವರು, ಪ್ರಸಕ್ತ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ 600 ಕ್ಕಿಂತ ಹೆಚ್ಚು ಅಂಕ ಪಡೆದ 2500 ಕ್ಕೂ ಹೆಚ್ಚಿನ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನದ ಜೊತೆಗೆ 10 ಸಾವಿರ ರೂಪಾಯಿ ವಿಶೇಷ ಪ್ರೋತ್ಸಾಹ ಧನ ಮತ್ತು ಅಭಿನಂದನಾ ಪತ್ರ ನೀಡಲಾಗುವುದು ಎಂದು ತಿಳಿಸಿದರು.