ಹೊಸ ಕಟ್ಟಡಗಳನ್ನು ನಿರ್ಮಿಸುವಾಗ ವಾಸ್ತು ತುಂಬಾ ಮುಖ್ಯವಾಗುತ್ತದೆ. ಅದು ನಿಮ್ಮ ಮನೆ, ಕಚೇರಿ, ಅಂಗಡಿಗಳು, ಹೋಟೆಲ್, ರೆಸ್ಟೋರೆಂಟ್ ಇತ್ಯಾದಿಗಳಾಗಿದ್ದರು ವಾಸ್ತು ಶಾಸ್ತ್ರದ ಪ್ರಕಾರವೇ ನಿರ್ಮಿಸಬೇಕು.
ವಾಸ್ತು ಶಾಸ್ತ್ರದ ಪ್ರಕಾರ ಯಾವುದೇ ಕಟ್ಟಡವನ್ನು ನಿರ್ಮಿಸಿದರೂ ಅಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸಿರುತ್ತದೆ. ಇಲ್ಲವಾದರೆ ನಿಮ್ಮ ವ್ಯವಹಾರ, ಸಂಪತ್ತಿನಲ್ಲಿ ನಷ್ಟ ಅನುಭವಿಸಬೇಕಾಗುತ್ತದೆ.
ನೀವು ಕಟ್ಟಡ ನಿರ್ಮಾಣ ಮಾಡಬೇಕೆನ್ನುವ ಭೂಮಿಯು ಸರಿಯಾದ ಆಕಾರದಲ್ಲಿರಬೇಕು. ವಾಸ್ತು ಶಾಸ್ತ್ರದ ಪ್ರಕಾರ ಹೋಟೆಲ್ ನಿರ್ಮಾಣಕ್ಕಾಗಿ ಆಯತಾಕಾರ ಅಥವಾ ಚೌಕಾಕಾರದಲ್ಲಿರಬೇಕು. ಅದರ ಎತ್ತರವೂ ಈಶಾನ್ಯ ದಿಕ್ಕಿನಿಂದ ನೈರುತ್ಯ ದಿಕ್ಕಿನವರೆಗೆ ಇದ್ದರೆ ಉತ್ತಮ.