
ಬಾಲಿವುಡ್ ನಟಿ ಕತ್ರಿನಾ ಕೈಫ್ ಕೊನೆಗೂ ವೈವಾಹಿಕ ಬದುಕಿಗೆ ಕಾಲಿಡುತ್ತಿದ್ದಾರೆ. ಸಲ್ಮಾನ್ ಖಾನ್, ರಣಬೀರ್ ಕಪೂರ್ ಸೇರಿದಂತೆ ಹಲವು ನಟರ ಜೊತೆ ಕತ್ರಿನಾ ಕೈಫ್ ಅವರ ಹೆಸರು ತಳುಕು ಹಾಕಿಕೊಂಡಿತ್ತಾದರೂ ಅಂತಿಮವಾಗಿ ಅವರು ನಟ ವಿಕ್ಕಿ ಕೌಶಲ್ ಅವರನ್ನು ವರಿಸುತ್ತಿದ್ದಾರೆ.
ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿನ ಸಿಕ್ಸ್ ಸೆನ್ಸಸ್ ರೆಸಾರ್ಟ್ ನಲ್ಲಿ ಡಿಸೆಂಬರ್ 9ರಂದು ಈ ಜೋಡಿ ಹಸೆಮಣೆ ಏರಲಿದ್ದು, ಇದಕ್ಕಾಗಿ ಈಗಾಗಲೇ ಅದ್ಧೂರಿ ಸಿದ್ಧತೆ ನಡೆದಿದೆ. ಆಯ್ದ ಅತಿಥಿಗಳ ಸಮ್ಮುಖದಲ್ಲಿ ಈ ಜೋಡಿ ವೈವಾಹಿಕ ಬದುಕಿಗೆ ಕಾಲಿಡುತ್ತಿದೆ. ವಿವಾಹ ಸಮಾರಂಭಕ್ಕೆ ಬಾಲಿವುಡ್ ಗಣ್ಯರೂ ಸೇರಿದಂತೆ ಹಲವರನ್ನು ಆಹ್ವಾನಿಸಲಾಗಿದೆ.
BIG BREAKING: ರೂಪಾಂತರಿ ಭೀತಿ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ; ಒಂದೇ ದಿನ 477 ಜನ ಬಲಿ
ಆಗಮಿಸುವ ಅತಿಥಿಗಳಿಗೆ ಕೆಲವೊಂದು ಷರತ್ತುಗಳನ್ನು ವಿಧಿಸಲಾಗಿದೆ ಎನ್ನಲಾಗಿದ್ದು, ಪ್ರಮುಖವಾಗಿ ವಿವಾಹ ಸಮಾರಂಭದ ಕುರಿತು ಈಗ ಎಲ್ಲಿಯೂ ಬಹಿರಂಗಪಡಿಸದಂತೆ ತಿಳಿಸಲಾಗಿದೆ. ಜೊತೆಗೆ ವಿವಾಹದಲ್ಲಿ ನವ ಜೋಡಿಯೊಂದಿಗೆ ಆಹ್ವಾನಿತರು ತಮ್ಮ ಮೊಬೈಲ್ ನಲ್ಲಿ ಫೋಟೋ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ.
ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಅತಿಥಿಗಳು ವಿವಾಹ ಸಮಾರಂಭದ ಫೋಟೋಗಳನ್ನು ಅಪ್ಲೋಡ್ ಮಾಡದಂತೆ ಮನವಿ ಮಾಡಲಾಗಿದ್ದು, ವಿವಾಹ ಸಮಾರಂಭ ಪೂರ್ಣಗೊಳ್ಳುವವರೆಗೆ ಬಾಹ್ಯ ಜಗತ್ತಿನ ಸಂಪರ್ಕವನ್ನು ಕಡಿದುಕೊಳ್ಳುವಂತೆ ತಿಳಿಸಲಾಗಿದೆ ಎನ್ನಲಾಗಿದೆ.