ಕನ್ನಡದ ‘ಕೋಟ್ಯಾಧಿಪತಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಲೈನ್ ಮ್ಯಾನ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬೀಳಗಿ ಹೆಸ್ಕಾಂ ಲೈನ್ ಮ್ಯಾನ್ ತಿಮ್ಮಣ್ಣ ಭೀಮಪ್ಪ ಗುರೆಡ್ಡಿ ಆತ್ಮಹತ್ಯೆಗೆ ಶರಣಾಗಿದ್ದು, ತಾಲೂಕಿನ ಅಮಲಝರಿ ಸಮೀಪದ ತೋಟದಲ್ಲಿ ಇವರ ಶವ ಪತ್ತೆಯಾಗಿದೆ.
‘ಕೋಟ್ಯಾಧಿಪತಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇವರು 6.40 ಲಕ್ಷ ರೂಪಾಯಿಗಳನ್ನು ಬಹುಮಾನವಾಗಿ ಪಡೆದಿದ್ದರು.
ತಮ್ಮ ತಂದೆ ಅನಾರೋಗ್ಯದಿಂದ ಬಳಲುತ್ತಿರುವುದು ಹಾಗೂ ಮನೆ ನಿರ್ಮಾಣಕ್ಕೆ ಮಾಡಿದ ಸಾಲದಿಂದ ಬೇಸತ್ತು ತಿಮ್ಮಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.