alex Certify ಕನ್ನಡದ ಖ್ಯಾತ ಕವಿ ಕೆ.ವಿ. ತಿರುಮಲೇಶ್ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡದ ಖ್ಯಾತ ಕವಿ ಕೆ.ವಿ. ತಿರುಮಲೇಶ್ ಇನ್ನಿಲ್ಲ

ಕನ್ನಡದ ಖ್ಯಾತ ಕವಿ, ಕತೆಗಾರ, ಅನುವಾದಕ ಕೆ.ವಿ. ತಿರುಮಲೇಶ್‌ ವಿಧಿವಶರಾಗಿದ್ದಾರೆ. 82 ವರ್ಷದ ತಿರುಮಲೇಶ್‌ ಹೈದರಾಬಾದಿನ ತಮ್ಮ  ಪುತ್ರಿಯ ನಿವಾಸದಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಇತ್ತೀಚೆಗಷ್ಟೇ ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಯಲ್ಲಿ  ವಿಶ್ರಾಂತಿ ಪಡೆಯುತ್ತಿದ್ದರು. ತಿರುಮಲೇಶ್‌, ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಎಂಬ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ತಿರುಮಲೇಶ್‌, ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಅಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಸೇರಿ ಅಲ್ಲಿಯೇ ನಿವೃತ್ತರಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...