alex Certify ಕನ್ನಡಿಗರು ತಬ್ಬಲಿಗಳಲ್ಲ; ಭಾಷಾಭಿಮಾನ ಬಡಿದೆಬ್ಬಿಸಿ; ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡಿಗರು ತಬ್ಬಲಿಗಳಲ್ಲ; ಭಾಷಾಭಿಮಾನ ಬಡಿದೆಬ್ಬಿಸಿ; ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿಚಾರದಲ್ಲಿ ಮಾಧ್ಯಮಗಳು ಇನ್ನಷ್ಟು ಕ್ರಿಯಾಶೀಲವಾಗಬೇಕು. ಜನರಲ್ಲಿನ ಭಾಷಾಭಿಮಾನವನ್ನು ಕಾಲಕಾಲಕ್ಕೆ ಬಡಿದೆಬ್ಬಿಸಬೇಕಾದ ಜವಾಬ್ದಾರಿ ಮಾಧ್ಯಮಗಳದ್ದು. ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಮಾಧ್ಯಮದ ಪಾಲ್ಗೊಳ್ಳುವಿಕೆ ಪ್ರಮುಖವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಕನ್ನಡ ಭಾಷೆಗೆ ಗೂಗಲ್, ಅಮೇಜಾನ್ ನಿಂದ ಅಪಮಾನ, ಹಿಂದಿ ಹೇರಿಕೆ ವಿಚಾರದ ಬಗ್ಗೆ ಮತ್ತೆ ಕಿಡಿಕಾರಿರುವ ಕುಮಾರಸ್ವಾಮಿ, ಕನ್ನಡಿಗರ ಭಾಷಾಭಿಮಾನವನ್ನು ಗೂಗಲ್, ಅಮೇಜಾನ್ ಕೆಣಕಿದ್ದವೋ, ಇಲ್ಲವೇ ಪಟ್ಟಭದ್ರರು ಕೆಣಕಿದ್ದರೋ…..ಆದರೆ, ಕನ್ನಡಿಗರು ಖಚಿತವಾಗಿ ಸಿಡಿಯುತ್ತಾರೆ ಎಂಬ ಉತ್ತರ ಕೆಣಕಿದವರಿಗೆ ಸಿಕ್ಕಿದೆ. ಈ ವಿಚಾರ ಚರ್ಚೆಯಾಗಬೇಕಾದ ಅಗತ್ಯವಿದೆ. ಕನ್ನಡ, ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯ ದೊಡ್ಡದಿದೆ ಎಂದಿದ್ದಾರೆ.

ಕನ್ನಡದ ವಿಚಾರದಲ್ಲಿನ ಅಜಾಗರೂಕತೆ, ಅಸೂಕ್ಷ್ಮತೆ, ಭಂಡತನವನ್ನು ನಾವು ಪ್ರಶ್ನೆ ಮಾಡಬೇಕಿತ್ತು, ಮಾಡಿದ್ದೇವೆ. ಆದರೆ, ಯಕಶ್ಚಿತ್‌ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ನಮ್ಮ ಹೋರಾಟಗಳನ್ನು ಕೇಂದ್ರೀಕರಿಸಿ ಏನು ಉಪಯೋಗ? ನಮ್ಮ ಹೋರಾಟ ಇರಬೇಕಾದ್ದು ಒಕ್ಕೂಟ ವ್ಯವಸ್ಥೆಯಲ್ಲಿನ ನಮ್ಮ ಹಕ್ಕುಗಳಿಗಾಗಿ. ನಮಗೆ ಸಿಗಬೇಕಾದ ನ್ಯಾಯದ ವಿಚಾರಕ್ಕಾಗಿ. ರಾಜಕೀಯದಲ್ಲಿನ ಹಿಂದಿ ಪಾರಮ್ಯವನ್ನು ಕಣ್ಣಾರೆ ಕಂಡವನು ನಾನು. ದೇವೇಗೌಡರು 11 ತಿಂಗಳು ಪ್ರಧಾನ ಮಂತ್ರಿಯಾಗಿದ್ದರು. ಭಾಷೆಯ ವಿಚಾರದಲ್ಲಿ ಅವರೆಷ್ಟು ನೋವು ಅನುಭವಿಸಬೇಕಾಯಿತು ಎಂಬುದು ಈಗ ಗುಟ್ಟಾಗಿ ಏನೂ ಉಳಿದಿಲ್ಲ. ಹಿಂದಿಯೇತರರು ದೇಶದ ಅತ್ಯುನ್ನತ ಸ್ಥಾನ ವಹಿಸಿಕೊಳ್ಳುವುದನ್ನು ಹಿಂದಿ ಲಾಭಿ ಎಂದೂ ಸಹಿಸುವುದಿಲ್ಲ. ಕೇಂದ್ರ ಸರ್ಕಾರಗಳೆಲ್ಲವೂ ಅಪಮಾರ್ಗದಲ್ಲಿ ಹಿಂದಿಯನ್ನು ಹೇರಿಕೊಂಡೇ ಬಂದಿವೆ. ಕನ್ನಡವನ್ನು 3ನೇ ದರ್ಜೆ ಭಾಷೆಯಾಗಿ ಕಾಣುತ್ತಾ ಬಂದಿವೆ. ಇತ್ತೀಚಿನ ವರ್ಷಗಳಲ್ಲಂತೂ ಹಿಂದಿ ಹೇರಿಕೆಯ ಪ್ರಯತ್ನ ಅತ್ಯಂತ ಪ್ರಬಲವಾಗಿ ನಡೆಯುತ್ತಿದೆ. ‘ಒಂದು ದೇಶ ಒಂದು ಭಾಷೆ‘ ಪರಿಕಲ್ಪನೆ ಅಡಿಯಲ್ಲಿ ಹಿಂದಿಯನ್ನು ರಾಷ್ಟ್ರಭಾಷೆ ಮಾಡುವ ಪ್ರಯತ್ನಗಳಾಗುತ್ತಿವೆ ಎಂದು ಕಿಡಿಕಾರಿದ್ದಾರೆ.

ಲೋಕಸಭೆಯಲ್ಲಿ ಕನ್ನಡದಲ್ಲಿ ಮಾತನಾಡಿದರೆ ಮಾನ್ಯತೆ ಸಿಗುವುದಿಲ್ಲ, ಗಂಭೀರವಾಗಿಯೂ ಆಲಿಸುವುದಿಲ್ಲ. ಕೇಂದ್ರದ ಪ್ರಕಟಣೆಗಳು ಸ್ಥಳೀಯ ಭಾಷೆಯಲ್ಲಿ ಸಿಗುವುದಿಲ್ಲ. ಕೇಂದ್ರದ ಸೇವೆಗಳು ಕನ್ನಡದಲ್ಲಿಲ್ಲ. ಅಧಿಕಾರಿಗಳು, ಸಿಬ್ಬಂದಿ ಕನ್ನಡದಲ್ಲಿ ಮಾತನಾಡುವುದಿಲ್ಲ. ವೆಬ್‌ಸೈಟ್‌ಗಳಲ್ಲಿ ಕನ್ನಡವಿಲ್ಲ. ಗ್ರಾಹಕ ಸೇವೆ ಕನ್ನಡದಲ್ಲಿ ಸಿಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೂ ತಬ್ಬಲಿ ಮಕ್ಕಳಂತೆ ಬಾಳುವುದಿದೆಯಲ್ಲ ಅದು ಅಪಾಯಕಾರಿ. ಕನ್ನಡಿಗರು ತಬ್ಬಲಿಗಳಲ್ಲ. ರಾಜ್ಯ ಕಟ್ಟಿದವರು, ರಾಜ್ಯ ಆಳಿದವರು, ರಾಜ್ಯ ವಿಸ್ತರಿಸಿದವರು. ಅದು ನಮ್ಮ ಐತಿಹಾಸಿಕ ಗುಣ. ಕನ್ನಡಿಗರಾದ ನಮಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ನಮ್ಮ ಐತಿಹಾಸಿಕ, ಚಾರಿತ್ರಿಕ ಗುಣ ಜಾಗೃತರಾಗಿ ಹೋರಾಡಬೇಕಿದೆ ಎಂದು ಕರೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...