ಬೆಂಗಳೂರು: ಉಕ್ರೇನ್ ನಲ್ಲಿ ಕನ್ನಡಿಗ ನವೀನ್ ಸಾವಿಗೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಮಲಿಂಗಾರೆಡ್ಡಿ, ಉಕ್ರೇನ್ ಮೇಲೆ ರಷ್ಯಾ ದಾಳಿ ತೀವ್ರಗೊಂಡಿದೆ. ಭಾರತೀಯ ವಿದ್ಯಾರ್ಥಿಗಳನ್ನು ತ್ವರಿತವಾಗಿ ಸ್ಥಳಾಂತರ ಮಾಡಬೇಕು. ರಾಜ್ಯದ ವಿದ್ಯಾರ್ಥಿ ನವೀನ್ ರಷ್ಯಾ ದಾಳಿಗೆ ಬಲಿಯಾಗಿದ್ದಾನೆ. ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ಕಿಡಿಕಾರಿದರು.
BIG NEWS: ಹದಿಹರೆಯದ ಹೆಣ್ಣು ಮಕ್ಕಳ ಸುರಕ್ಷತೆ ಹೆಚ್ಚಿಸಲು ಆತ್ಮರಕ್ಷಣಾ ತರಬೇತಿ ಆರಂಭಕ್ಕೆ ಕೇಂದ್ರದ ಸಿದ್ಧತೆ
ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪ್ರಿಯರು. ನಮ್ಮ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಎಷ್ಟು ದಿನಗಳಿಂದ ಸಂಕಷ್ಟಕ್ಕೀಡಾಗಿದ್ದಾರೆ. ಈವರೆಗೆ ಕೇವಲ 500 ವಿದ್ಯಾರ್ಥಿಗಳನ್ನು ಮಾತ್ರ ಕರೆತರಲಾಗಿದೆ. ವಿದ್ಯಾರ್ಥಿಗಳ ಸಂಕಷ್ಟ ಕೇಂದ್ರ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲವೇ? ಪ್ರಧಾನಿ ಮೋದಿ ಅನಗತ್ಯ ಪ್ರಚಾರ ಮಾಡುವುದನ್ನು ಬಿಟ್ಟು ಈಗಲಾದರೂ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳನ್ನು ತಕ್ಷಣ ಸ್ಥಳಾಂತರ ಮಾಡಲಿ ಎಂದು ಆಗ್ರಹಿಸಿದರು.
ನವೀನ್ ಸಾವಿಗೆ ಕಾರಣ ಯಾರು? 4,000 ವಿದ್ಯಾರ್ಥಿಗಳು ಉಕ್ರೇನ್ ನಲ್ಲಿದ್ದಾರೆ. ಆದರೂ ವಿದ್ಯಾರ್ಥಿಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ. ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರುವ ಬಗ್ಗೆ ಅವರಿಗೆ ಆಸಕ್ತಿಯೂ ಇದ್ದಂತೆ ಕಾಣುತ್ತಿಲ್ಲ. ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ನಾಯಕರು ಬ್ಯುಸಿಯಾಗಿದ್ದಾರೆ. ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.