ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರದ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ರಾಜ್ಯ ಸಚಿವರಿಗೆ ಸಮನಾದ ಸ್ಥಾನ ಸಿಗಲಿದ್ದು, ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಸೌಲಭ್ಯಗಳನ್ನು ನೀಡಲಾಗುತ್ತದೆ.
ಇದೇ ಮೊದಲ ಬಾರಿಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಲಾಗಿದ್ದು, ಈ ಮೊದಲು ಸಾಲುಮರದ ತಿಮ್ಮಕ್ಕ ಅವರಿಗೂ ರಾಜ್ಯ ಸಚಿವರ ಸ್ಥಾನಮಾನ ನೀಡಿ ಗೌರವಿಸಲಾಗಿತ್ತು.